ತಾಂಬಾ ಗ್ರಾಮದಲ್ಲಿ ಇಂದು ಕೈ ಪ್ರಚಾರ

Hand campaign today in Tamba village
Published on

ವಿಜಯಪುರ : ಸಿಂದಗಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಏ. 29 ರಂದು ಸಂಜೆ 5 ಕ್ಕೆ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಪ್ರಚಾರ ಹಿನ್ನೆಲೆಯಲ್ಲಿ ಬೃಹತ್​ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದೆ.

ಕಾಂಗ್ರೆಸ್​ ಸ್ಟಾರ್​ ಪ್ರಚಾರಕ ಲಕ್ಷ$್ಮಣ ಸವದಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಶಾಸಕ ಅಶೋಕ ಮನಗೂಳಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಶಾಸಕ ಅಪ್ಪಾಜಿ ನಾಡಗೌಡ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠಲ ಕಟಕಧೋಂಡ, ವಿಪ ಸದಸ್ಯರಾದ ಪ್ರಕಾಶ ಹುಕ್ಕೇರಿ, ಪ್ರಕಾಶ ರಾಠೋಡ ಮತ್ತು ಸುನೀಲಗೌಡ ಪಾಟೀಲ, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಮಕ್ಬೂಲ್​ ಬಾಗವಾನ, ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಮತ್ತು ಅಬ್ದುಲ್​ ಹಮೀದ್​ ಮುಶ್ರೀಫ ಭಾಗವಹಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಸ್​. ಲೋಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net