ಮೈಸೂರು ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಫೆ.14 ರಿಂದ ಹಸ್ತಶಿಲ್ಪ ಪ್ರದರ್ಶನ ಮಾರಾಟ ಮೇಳ

IMG20250217133055
Published on

ಮೈಸೂರು: ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಫೆ.14 ರಿಂದ 23ರವರೆಗೆ ಹಸ್ತಶಿಲ್ಪ ಪ್ರದರ್ಶನ, ಮಾರಾಟ ಮೇಳ ಆಯೋಜಿಸಲಾಗಿದೆ.

ಕೇಂದ್ರ ಸರ್ಕಾರದ ವಸ್ತ್ರ ಮಂತ್ರಾಲಯದ ಕರಕುಶಲ ಅಭಿವೃದ್ಧಿ ಆಯುಕ್ತರ ಕಚೇರಿಯು ಕುಶಲಕರ್ಮಿಗಳಿಗೆ ನೇರ ಮಾರುಕಟ್ಟೆಯನ್ನು ಒದಗಿಸಲು ಪ್ರತಿ ವರ್ಷ ಹಲವಾರು ಮೇಳಗಳನ್ನು ಆಯೋಜಿಸುವ ಮೂಲಕ ಪ್ರದರ್ಶನ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಒದಗಿಸುತ್ತಿದೆ. ಇಂಥ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾದ ಗಾಂಧಿ ಶಿಲ್ಪ ಬಜಾರ್‌ಅನ್ನು ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಆಯೋಜನೆ ಮಾಡಲಾಗಿದೆ.

70 ಮಳಿಗೆಗಳಲ್ಲಿ 18ಕ್ಕೂ ಹೆಚ್ಚು ರಾಜ್ಯಗಳ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಕರಕುಶಲಕರ್ಮಿಗಳು ಹಾಗೂ ಕೈಮಗ್ಗ ನೇಕಾರರು ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳು ಒಂದೇ ಸೂರಿ ನಡಿಯಲ್ಲಿ ಮೈಸೂರಿನ ಸಂಸ್ಕೃತಿ ಪ್ರಿಯರಿಗೆ ಲಭ್ಯವಾಗುವಂತೆ ಈ ಮೇಳದಲ್ಲಿ ಮಾಡಲಾಗಿದೆ. ಕುಶಲಕರ್ಮಿಗಳು ತಮ್ಮ ಕುಲಶಕಲೆಗಳನ್ನು ಗ್ರಾಹಕರ ಅಗತ್ಯ ಮತ್ತು ಅಭಿರುಚಿಯನ್ನು ತಿಳಿದುಕೊಂಡು ಮಾರುಕಟ್ಟೆಗೆ ಬೇಕಾದ ನವೀನ ವಿನ್ಯಾಸದ ವಸ್ತುಗಳನ್ನು ರೂಪಿಸಿಕೊಳ್ಳಲು ಈ ಕಾರ್ಯಕ್ರಮ ಆಯೋಜನೆಗೊಳ್ಳುತ್ತಿದೆ.

ಮರದ ಕೆತ್ತನೆ, ಶಿಲಾ ಶಿಲ್ಪ, ಕಂಚಿನ ವಿಗ್ರಹಗಳು, ಮರದ ಕುಂದಣ ಕಲೆ, ಮಣ್ಣಿನ ಮಡಿಕೆಗಳು, ಪೇಪರ್, ರತ್ನಗಂಬಳಿ, ಹತ್ತಿ ಜಮಕಾನ, ಇಮಿಟೇಶನ್ ಆಭರಣಗಳು, ಮರದ ಅರಗಿನ ಕಲಾವಸ್ತುಗಳು, ಬಾಟಿಕ್, ಕಲಾಂಕಾರಿ ಚಿತ್ರಕಲೆ, ಚರ್ಮದ ಅಕರ್ಷಕ ವಸ್ತುಗಳು, ಕಲಾತ್ಮಕ ಚರ್ಮದ ಚಪ್ಪಲಿಗಳು, ಚನ್ನಪಟ್ಟಣದ ಗೊಂಬೆಗಳು, ಕಸೂತಿ ಕಲೆ, ಮಧ್ಯಪ್ರದೇಶ ರಾಜ್ಯದ ಮಹೇಶ್ವರಿ, ಚಂದೇರಿ ಸೀರೆಗಳು, ಒಡಿಶಾ ರಾಜ್ಯದ ಪಟ್ಟ ಚಿತ್ರ, ಬೆಳ್ಳಿಯ ಸೂಕ್ಷ್ಮ ವಿನ್ಯಾಸ ವಸ್ತುಗಳು, ಬಿದಿರು-ಬೆತ್ತದ ವಸ್ತುಗಳು, ಚಿಕನ್ ಎಂಬ್ರಾಯ್ಡರಿ, ಡ್ರೈ ಪ್ಲವರ್‌ಗಳು, ಕಲಾತ್ಮಕ ಕಲ್ಲಿನ ವಸ್ತುಗಳು, ಪಂಜಾಬ್ ರಾಜ್ಯದ ಫುಲ್ಕಾರಿ ಬಟ್ಟೆ ಗಳು ಈ ಮೇಳ ದಲ್ಲಿ ಒಂದೇ ಸೂರಿನಡಿ ಖರೀದಿಗೆ ಸಿಗಲಿದೆ. ಮಧ್ಯವರ್ತಿಗಳು ಇಲ್ಲದೆ ಗ್ರಾಹಕರು ಮತ್ತು ಉತ್ಪಾದಕರ ಮಧ್ಯೆ ನೇರ ಸಂಪರ್ಕ ಮತ್ತು ಸಂವಹನಕ್ಕೆ ಅವಕಾಶ ಕಲ್ಪಿಸುವ ಈ ಮೇಳ ಗ್ರಾಹಕ ಮತ್ತು ಕುಶಲಕರ್ಮಿಗಳ ಬಾಂಧವ್ಯ ವೃದ್ಧಿಗೂ ಅನುಕೂಲ ಒದಗಿಸುತ್ತಿದೆ. ಮೇಳಕ್ಕೆ ಫೆ.14 ರಂದು ಸಂಜೆ 4ಕ್ಕೆ ಚಾಲನೆ ದೊರೆಯಲಿದೆ. ಈ ಪ್ರದರ್ಶನ ಹಾಗೂ ಮಾರಾಟ ಪ್ರತಿದಿನ ಬೆಳಗ್ಗೆ 10.30 ರಿಂದ ರಾತ್ರಿ 9.00ರವರೆಗೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net