ಶಾಲೆಯ ಉನ್ನತಿಗೆ ವಿದ್ಯಾರ್ಥಿಗಳ ಬೆಂಬಲ : ಎಸ್.ಜನಾರ್ದನ

gan hand
ಮರವಂತೆ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಯೋಗಾಲಯ ಪರಿಕರಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಗೌರವಿಸಲಾಯಿತು
Published on

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

ಶಾಲೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕುತ್ತದೆ. ವಿದ್ಯಾರ್ಥಿಗಳು ತಾವು ಪಡೆದ ಶಿಕ್ಷಣ ಆಧರಿಸಿ ಬದುಕು ರೂಪಿಸಿಕೊಳ್ಳುತ್ತಾರೆ. ಅವರು ಗಳಿಸುವ ಸಾಮರ್ಥ್ಯ ಪಡೆದಾಗ ತಮ್ಮನ್ನು ಬೆಳೆಸಿದ ಶಾಲೆಯ ಉನ್ನತಿಗೆ ಅಗತ್ಯ ಬೆಂಬಲ ನೀಡಬೇಕು ಎಂದು ಮರವಂತೆಯ ನಿವೃತ್ತ ಶಿಕ್ಷಕ ಎಸ್.ಜನಾರ್ದನ ಹೇಳಿದರು.

ಮರವಂತೆ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಶಾಲೆಯ ಮೊದಲ ವಿದ್ಯಾರ್ಥಿ ತಂಡ ಶಾಲೆಗೆ ನೀಡಿದ ಪ್ರಯೋಗಾಲಯ ಪರಿಕರಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಮಡಿವಾಳ ಅಧ್ಯಕ್ಷತೆ ವಹಿಸಿದ್ದರು. ಮೊದಲ ವರ್ಷದಲ್ಲಿ ಶಿಕ್ಷಕರಾಗಿದ್ದ ಕೃಷ್ಣ ನೇರಳಕಟ್ಟೆ, ಜಯಶೀಲಾ ನಾಯಕ್, ಡಾ.ಕಿಶೋರ್ ಕುಮಾರ ಶೆಟ್ಟಿ, ರಮಾನಂದ ಅವರನ್ನು ಗೌರವಿಸಲಾಯಿತು.

ರಜತ ಮಹೋತ್ಸವ ಸಮಿತಿ ಅಧ್ಯಕ್ಷ ದಯಾನಂದ ಬಳೇಗಾರ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ ಪಟಗಾರ್, ಉದ್ಯಮಿ ಸತೀಶ ಪೂಜಾರಿ, ಬೈಂದೂರು ಜೇಸಿ ಅಧ್ಯಕ್ಷೆ ಅನಿತಾ ಆರ್.ಕೆ., ಕೊಡುಗೆ ನೇತೃತ್ವ ವಹಿಸಿದ್ದ ಸಂತೋಷ್ ಕುಮಾರ್, ರೋಶನ್ ಲೂವಿಸ್, ವಿದ್ಯಾರ್ಥಿ ತಂಡದ ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಿರಿಯ ಸಹಾಯಕ ಶಿಕ್ಷಕ ಸರ್ವೋತ್ತಮ ಭಟ್ ಸ್ವಾಗತಿಸಿ, ಶಿಕ್ಷಕ ಶ್ರೀಧರ ಭಟ್ ವಂದಿಸಿದರು. ಹಿತೇಶ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net