ಶಾಲಾ ಅಭಿವೃದ್ಧಿಗೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

Oplus_131074
ಸೋಮವಾರಪೇಟೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್(ಯಿಫಾ) ವತಿಯಿಂದ ನೇರುಗಳಲೆ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಅಭಿವೃದ್ಧಿಗೆ 25 ಸಾವಿರ ರೂ. ಆರ್ಥಿಕ ನೆರವಿನ ಚೆಕ್‌ಅನ್ನು ಶ್ರೀನಿಧಿ ಲಿಂಗಪ್ಪ ಹಸ್ತಾಂತರಿಸಿದರು. ಬೋಜೇಗೌಡ, ಎಸ್.ಎಂ.ಡಿಸಿಲ್ವಾ, ಹರ್ಷಿತ್, ವಿನಯ್ ಇದ್ದರು.
Published on

 ಸೋಮವಾರಪೇಟೆ: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ತಾಲೂಕಿನ ನೇರುಗಳಲೆ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಅಭಿವೃದ್ಧಿಗೆ 25 ಸಾವಿರ ರೂ. ಆರ್ಥಿಕ ನೆರವು ಒದಗಿಸಲಾಯಿತು.

ಶಾಲಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಕುರಂ ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ಅಧ್ಯಕ್ಷ ಬೋಜೇಗೌಡ ಅವರಿಗೆ ಯಿಫಾ ಸಂಘಟನೆಯ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಅವರು ಚೆಕ್ ಹಸ್ತಾಂತರಿಸಿದರು.

ಟ್ರಸ್ಟ್ ಅಧ್ಯಕ್ಷ ಬೋಜೇಗೌಡ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗಿ ಮುಚ್ಚುವ ಹಂತದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲೇಬೇಕೆಂಬ ಚಿಂತನೆಯೊಂದಿಗೆ ನೇರುಗಳಲೆಯಲ್ಲಿ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲಾಗಿದೆ ಎಂದರು.

ಈಗಾಗಲೇ 19 ಲಕ್ಷಕ್ಕೂ ಅಧಿಕ ಹಣವನ್ನು ಶಾಲೆಯ ಅಭಿವೃದ್ಧಿಗೆ ವ್ಯಯಿಸಲಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಪಟ್ಟಣದ ಶಾಲೆಗಳಂತೆಯೇ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸಮಿತಿ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿಯೇ ಪ್ರಥಮ ಎಂಬಂತೆ ಸರ್ಕಾರಿ ಶಾಲೆಗೆ ವಾಹನವನ್ನು ವ್ಯವಸ್ಥೆ ಮಾಡಲಾಗಿದೆ. ವಾಹನ ಗ್ರಾಮೀಣ ಭಾಗದಲ್ಲಿ ಸಂಚರಿಸಿ ಮಕ್ಕಳನ್ನು ಶಾಲೆಗೆ ಕರೆ ತರುತ್ತಿದೆ. ಆರಂಭಿಕ ವರ್ಷದಲ್ಲಿ ಎಲ್‌ಕೆಜಿಯಲ್ಲಿ 19 ವಿದ್ಯಾರ್ಥಿಗಳಿದ್ದಾರೆ. ಶಿಕ್ಷಣ ವ್ಯಾಪಾರೀಕರಣಗೊಂಡಿರುವ ಪ್ರಸ್ತುತತೆಯಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಲು ಅಂಕುರಂ ಟ್ರಸ್ಟ್ ಕೆಲಸ ಮಾಡುತ್ತಿದೆ  ಎಂದು ಹೇಳಿದರು.

ಯಿಫಾ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಸಂಘಟನೆಯ ಮೂಲಕ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ಭೂಕುಸಿತ, ಕೋವಿಡ್ ಸಂದರ್ಭ ಸದಸ್ಯರು ಹೆಚ್ಚು ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ಕೃಷಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಗದ್ದೆ ನಾಟಿ ಮೂಲಕ ಐಟಿ-ಬಿಟಿ ಕಂಪನಿ ಉದ್ಯೋಗಿಗಳು, ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಸಂಘಟನೆಯ ಉಪಾಧ್ಯಕ್ಷ ಹರ್ಷಿತ್ ಶಿವಪ್ಪ, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳಾದ ಎಸ್.ಎಂ.ಡಿಸಿಲ್ವಾ, ವಿನಯ್ ಸಂಭ್ರಮ್, ಎ.ಎಚ್. ತಿಮ್ಮಯ್ಯ, ಅಜಿತ್‌ಕುಮಾರ್, ಅನಿಲ್, ಶೈಲಾ, ಶಿಕ್ಷಕ ರಮೇಶ್, ಯಿಫಾ ಸಂಘಟನೆಯ ಕಾರ್ಯದರ್ಶಿ ಸಜನ್ ಮಂದಣ್ಣ, ಖಜಾಂಚಿ ಮೋಹಿತ್ ತಿಮ್ಮಯ್ಯ ಸೇರಿದಂತೆ ಪದಾಧಿಕಾರಿಗಳು ಇದ್ದರು. ನಂತರ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net