ಅಧಿಕೃತ ಹಕ್ಕೋಲೆ ಹಸ್ತಾಂತರ

Handing over of official title
Published on

ಮಡಿಕೇರಿ:

ಮುಂದಿನ ವರ್ಷ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ ೨೫ನೇ ವರ್ಷದ ಪ್ರತಿಷ್ಠಿತ ಮುದ್ದಂಡ ಹಾಕಿ ಹಬ್ಬಕ್ಕೆ ಮುದ್ದಂಡ ಕುಟುಂಬಸ್ಥರು ಪೂರ್ವಭಾವಿ ತಯಾರಿಯಲ್ಲಿ ತೊಡಗಿದ್ದಾರೆ. ನಗರದ ಹೊರ ವಲಯದ ಕರವಲೆ ಶ್ರೀ ಭಗವತಿ ಮಹಿಷ ಮರ್ದಿನಿ ದೇವಾಲಯದಲ್ಲಿ ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿ ಹಾಕಿ ಹಬ್ಬದ ಯಶಸ್ಸಿಗಾಗಿ ಪ್ರಾರ್ಥಿಸಿದರು. ೨೦೨೫ ರಲ್ಲಿ ಹಾಕಿ ಹಬ್ಬ ನಡೆಸಲು ಮುದ್ದಂಡ ಕುಟುಂಬಕ್ಕೆ ಕೊಡವ ಹಾಕಿ ಅಕಾಡೆಮಿ ಅಧಿಕೃತವಾಗಿ ಹಕ್ಕೋಲೆ (ಹಕ್ಕುಪತ್ರ) ನೀಡುವ ಮೂಲಕ ಶುಭ ಹಾರೈಸಿತು.

ಈ ಸಂದರ್ಭ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ, ಉಪಾಧ್ಯಕ್ಷರುಗಳಾದ ಕುಕ್ಕೇರ ಜಯ ಚಿಣ್ಣಪ್ಪ, ಬರಕಡ ಡೀನಾ ಪೂವಯ್ಯ, ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಚೆಯ್ಯಂಡ ಸತ್ಯ, ಎಲ್ಲಾ ನಿರ್ದೇಶಕರುಗಳು, ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಕಾರ್ಯಕಾರಿ ಮಂಡಳಿಯ ಮುದ್ದಂಡ ಡೀನ್ ಬೋಪಣ್ಣ, ಮುದ್ದಂಡ ರಾಯ್, ಮುದ್ದಂಡ ರಂಜಿತ್ ಪೊನ್ನಪ್ಪ, ಮುದ್ದಂಡ ಕಿರಣ್ ಪೂಣಚ್ಚ, ಮುದ್ದಂಡ ಆದ್ಯ ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.
ಮುಂದಿನ ವರ್ಷ ಮಡಿಕೇರಿಯ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮುದ್ದಂಡ ಹಾಕಿ ಹಬ್ಬ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net