

ಬೈಂದೂರು: ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹೈನುಗಾರಿಕಾ ಕ್ಷೇತ್ರ ಅಭಿವೃದ್ಧಿಪಡಿಸುವ ಉದ್ದೇಶದಿಂದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ನಿರ್ಮಾಣಕ್ಕೆ ಮತ್ತು ಹೈನುಗಾರಿಕೆಗೆ ಅನೇಕ ರೀತಿಯಲ್ಲಿ ಅನುದಾನ ನೀಡುವ ಮೂಲಕ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ ಎಂದು ಕಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.
ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ರಚನೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಂಜೂರಾದ 2 ಲಕ್ಷ ರೂ. ಸಹಾಯಧನ ಮಂಜೂರಾತಿ ಪತ್ರ ಹಸ್ತಾಂತರಿಸಿ ಮಾತನಾಡಿದರು.
ಕಿರಮಂಜೇಶ್ವರ ವಲಯದ ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಶುಭಹಾರೈಸಿದರು. ತಾಲೂಕು ಯೋಜನಾಧಿಕಾರಿ ವಿನಯಕ ಪೈ ಪ್ರಸ್ತಾವಿಸಿದರು. ಕಿರಿಮಂಜೇಶ್ವರ ವಲಯ ಅಧ್ಯಕ್ಷ ಸುರೇಂದ್ರ ನಾಯ್ಕ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ರವಿ ಪೂಜಾರಿ, ದಿನೇಶ್ ಪೂಜಾರಿ, ಮೇಲ್ವಿಚಾರಕ ಭರತ್, ಕೊಡೇರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಮೂಕಾಂಬು, ಕೊಡೇರಿ ಒಕ್ಕೂಟ ಅಧ್ಯಕ್ಷೆ ಲಕ್ಷ್ಮೀ, ಸ್ಥಳೀಯ ಸೇವಾ ಪ್ರತಿನಿಧಿಗಳಾದ ಮಮತಾ, ಕುಸುಮ, ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರು, ಹೈನುಗಾರರು ಇದ್ದರು.