ಕೈಮಗ್ಗ ನೇಕಾರರಿಗೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

handloom.jpg
Published on


ಬೆಳಗಾವಿ:ಕೈಮಗ್ಗ ನೇಕಾರರ ಕೌಶಲ್ಯವನ್ನು ಗುರುತಿಸಿ ಕೈಮಗ್ಗ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣೈತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕೃಷ್ಟತೆ ಹೊಂದಿರುವ ಕೈಮಗ್ಗ ನೇಕಾರರಿಗೆ 2023-24ನೇ ಸಾಲಿನ ರಾಜ್ಯ ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹರು ಮೇ 31ರ ಒಳಗಾಗಿ ಬೆಳಗಾವಿ ನಗರದ ಅನಗೋಳ  ಸಾಮರ್ಥ್ಯ ಸೌಧ ಕಟ್ಟಡದ  ಕೈಮಗ್ಗ ಮತ್ತು ಜವಳಿ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.      

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net