ದೇವಸ್ಥಾನದ ಸಮಿತಿಗೆ ಚೆಕ್ ಹಸ್ತಾಂತರ

cheque
Published on

ರಟ್ಟಿಹಳ್ಳಿ: ತಾಲೂಕಿನ ಶಿರಗಂಬಿ ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ತಾಲೂಕು ಯೋಜನಾಧಿಕಾರಿ ಮಂಜುನಾಥ ಎಂ. ಅವರು 1 ಲಕ್ಷ ರೂಪಾಯಿ ಚೆಕ್ ಅನ್ನು ದೇವಸ್ಥಾನದ ಸಮಿತಿಗೆ ಹಸ್ತಾಂತರಿಸಿದರು.

ದೇವಸ್ಥಾನದ ಕಮಿಟಿ ಅಧ್ಯಕ್ಷ ಹನುಮಂತಪ್ಪ ಕಡೆಮನಿ, ರವೀಂದ್ರ ಮದ್ನಳ್ಳಿ, ಗ್ರಾಪಂ ಅಧ್ಯಕ್ಷ ಉಜ್ಜನಗೌಡ ಗೌಡರ, ಗ್ರಾಪಂ ಉಪಾಧ್ಯಕ್ಷ ಸುಧಾಮ ಮುದ್ದಣ್ಣನವರ, ಮಾಜಿ ಅಧ್ಯಕ್ಷ ಪ್ರಶಾಂತ ಮಾಳಗಿ, ಗ್ರಾಪಂ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯದ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net