

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ಕೆಲಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿರುವ 3 ಲಕ್ಷ ರೂ. ಮೊತ್ತದ ಡಿಡಿಯನ್ನು ಯೋಜನಾಧಿಕಾರಿ ಸುರೇಂದ್ರ, ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರರಾವ್ ಅವರಿಗೆ ಇತ್ತೀಚೆಗೆ ಹಸ್ತಾಂತರಿಸಿದರು.
ಆಡಳಿತ ಮಂಡಳಿಯ ಕಾರ್ಯದರ್ಶಿ ಕುಸುಮಾಕರ, ಕೊಕ್ಕಡ ಜೆಸಿಐ ಅಧ್ಯಕ್ಷ ಸಂತೋಷ್ ಜೈನ್, ಕಳೆಂಜ ಬಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಸೇವಾಪ್ರತಿನಿಧಿ ಭವಾನಿ ಮೊದಲಾದವರಿದ್ದರು.