

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ ವಿಟ್ಲ ವ್ಯಾಪ್ತಿಯ ಮಂಚಿ ಗ್ರಾಮದ ಪುದ್ದೋಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ ರಚನಾ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದಿಂದ 1 ಲಕ್ಷ ರೂ. ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ಇತ್ತೀಚೆಗೆ ಹಸ್ತಾಂತರಿಸಲಾಯಿತು.
ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್, ಯೋಜನೆಯ ಮಂಚಿ ಒಕ್ಕೂಟ ಅಧ್ಯಕ್ಷ ದಿವಾಕರ್ ನಾಯಕ್, ಮುಖ್ಯಶಿಕ್ಷಕ ಗಣೇಶ್ ಟಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಶಿಕ್ಷಕರು, ಗ್ರಾಮಾಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯ ಮೇಲ್ವಿಚಾರಕಿ ಸವಿತಾ, ಸೇವಾ ಪ್ರತಿನಿಧಿ ಚಂಚಲಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.