

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ವತಿಯಿಂದ ಮಣಿಪಾಲ ವಲಯದ ಮಂಚಿಕುಮೇರಿಯ ವಾಸಾಶನ ಫಲಾನುಭವಿ ಪ್ರಮೀಳಾ ಅವರಿಗೆ ಹೊಸವರ್ಷದ ಮೊದಲ ದಿನ ‘ವಾತ್ಸಲ್ಯ’ ಮನೆ ಹಸ್ತಾಂತರಿಸಲಾಯಿತು.
ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಮನೆ ಹಸ್ತಾಂತರಿಸಿದರು. ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಕಲ್ಮಾಡಿ, ನಗರಸಭಾ ಸದಸ್ಯ ಅಶೋಕ್ ನಾಯ್ಕ, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್, ಸದಸ್ಯರಾದ ಕುಶಲ್ ಶೆಟ್ಟಿ, ತಾಲೂಕು ಯೋಜನಾಧಿಕಾರಿ ರಾಮ ಎಂ., ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಕ್ಯಾ.ಹರೀಶ್, ಮಣಿಪಾಲ ವಲಯ ಅಧ್ಯಕ್ಷೆ ಸಾವಿತ್ರಿ, ಹೆರ್ಗ ಬಿ ಒಕ್ಕೂಟ ಅಧ್ಯಕ್ಷೆ ಸುಮಲತಾ, ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಮಣಿಪಾಲ ವಲಯದ ಸದಸ್ಯರು, ಒಕ್ಕೂಟದ ಸಂಗಳ ಸದಸ್ಯರು, ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತಾ ಸ್ವಾಗತಿಸಿದರು. ಹೆರ್ಗ ಬಿ ಸೇವಾ ಪ್ರತಿನಿಧಿ ಚಂದ್ರಕಲಾ ವಂದಿಸಿದರು. ವಲಯ ಮೇಲ್ವಿಚಾರಕ ಬಾಲಚಂದ್ರ ಕಾರ್ಯಕ್ರಮ ನಿರೂಪಿಸಿದರು.