

ಬೀಳಗಿ: ಹುಬ್ಬಳ್ಳಿಯಲ್ಲಿ ಕುಮಾರಿ ಅಂಜಲಿ ಅಂಬಿಗೇರ ಹಾಗೂ ನೇಹಾ ಹಿರೇಮಠ, ಭೀಕರ ಹತ್ಯೆ ಖಂಡಿಸಿ ಬೀಳಗಿಯಲ್ಲಿ ಸೋಮವಾರ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.
ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಪ್ರಾರಂಭಗೊಂಡ ಪ್ರತಿಭಟನೆ ಬಸ್ ನಿಲ್ದಾಣ ಪಕ್ಕದಲ್ಲಿ ಮಾನವ ಸರಪಳಿ ರಚಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನೇಹಾ ಹಿರೇಮಠ, ಭೀಕರ ಹತ್ಯೆ ಮರೆಮಾಸುವ ಮುನ್ನವೇ ಹೆಣ್ಣು ಮಕ್ಕಳ ಹತ್ಯೆ ನಡೆದಿರುವುದು ತೀವ್ರ ಖಂಡನೀಯ ಎಂದರು.
ನ್ಯಾಯವಾದಿ ಎಂ.ಆರ್. ಕೋಲಕಾರ ಮಾತನಾಡಿ, ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದರಿಂದ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ. ಹೆಣ್ಣು ಮಕ್ಕಳ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ ಕ್ರೌರ್ಯ, ದಬ್ಬಾಳಿಕೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಂಪೂರ್ಣ ವಿಲವಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು. ಕೂಡಲೇ ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ಜತೆಗೆ ನೊಂದ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು. ಅಲ್ಲದೆ, ಇಂಥ ಪ್ರಕರಣಗಳು ಮುಂದೆ ಮರುಕಳಿಸದಂತೆ ಮುನ್ನಚ್ಚರಿಕೆ ವಹಿಸಿಬೇಕೆಂದು ಒತ್ತಾಯಿಸಿದರು.
ನಂತರ ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ಮುಖಂಡ ಸಿದ್ದಣ್ಣ ಬಳಗಾನೂರ, ಪರಶುರಾಮ ಮಂಟೂರ, ರಾಜೇಂದ್ರ ಬಾರಕೇರ, ವೀರೇಂದ್ರ ಶೀಲವಂತ, ವಿ.ಜಿ. ರೇವಡಿಗಾರ, ಬಸವರಾಜ ಉಮಚಗಿಮಠ, ಐ.ಬಿ. ಅಂಬಿಗೇರ, ಶಿವಗಿರಿ ದಳವಾಯಿ, ಪ್ರಕಾಶ ಸುನಗಾರ, ಸಿದ್ದರಾಮಯ್ಯ ಮಠಪತಿ ಮತ್ತಿತರರಿದ್ದರು.