

ರಾಣೆಬೆನ್ನೂರ: ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಬನಶಂಕರಿ ನಗರದಲ್ಲಿ ಮಂಗಳವಾರ ನಡೆದಿದೆ.
ಗೋಪಾಲಶೆಟ್ಟಿ ಕೃಷ್ಣಪ್ಪ ಶೆಟ್ಟರ್ (68) ಮೃತ ವ್ಯಕ್ತಿ.
ಇವರು ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗದ ಕಾರಣ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.