LIVE| ಹಾನಗಲ್​, ಸಿಂದಗಿ ಉಪಸಮರ ಗೆಲುವು ಯಾರಿಗೆ? ಮತಎಣಿಕೆಯ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ

By election
Published on

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಇಂದು (ನ.2) ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದ್ದು, ಎರಡು ಕ್ಷೇತ್ರದ ಉಪಸಮರದಲ್ಲಿ ಯಾರು ಜಯಭೇರಿ ಬಾರಿಸಲಿದ್ದಾರೆ ಎಂಬ ಫಲಿತಾಂಶದ ಸ್ಪಷ್ಟ ಚಿತ್ರಣ ಮಧ್ಯಾಹ್ನದ ವೇಳೆಗೆ ಸಿಗಲಿದೆ. ಮತಎಣಿಕೆಯ ಕ್ಷಣ ಕ್ಷಣದ ಮಾಹಿತಿಯನ್ನು ಈ ಕೆಳಗಿನ ದಿಗ್ವಿಜಯ ನ್ಯೂಸ್​ ಫೇಸ್​ಬುಕ್​ ಲೈವ್​ನಲ್ಲಿ ಪಡೆಯಬಹುದಾಗಿದೆ.

ಎರಡೂ ಕ್ಷೇತ್ರಗಳಿಗೆ ಭಾನುವಾರ ಮತದಾನ ನಡೆದಿದ್ದು, ಹಾನಗಲ್ ಕ್ಷೇತ್ರದಲ್ಲಿ ಶೇ.83.72 ಹಾಗೂ ಸಿಂದಗಿ ಕ್ಷೇತ್ರದಲ್ಲಿ ಶೇ. 69.41ಮತದಾನವಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿ ಒಟ್ಟು 19 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಈಗಾಗಲೆ ನಿರ್ಧರಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದ ಆಯಾ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ. ಹಾನಗಲ್​ನಲ್ಲಿ ಬಿಜೆಪಿಯ ಶಿವರಾಜ ಶರಣಪ್ಪ ಸಜ್ಜನರ, ಕಾಂಗ್ರೆಸ್​ನಿಂದ ಶ್ರೀನಿವಾಸ ಮಾನೆ, ಜೆಡಿಎಸ್​ನ ನಿಯಾಜ್ ಶೇಖ್ ಸೇರಿ ಒಟ್ಟು 13 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಭೂಸನೂರ, ಕಾಂಗ್ರೆಸ್​ನಿಂದ ಅಶೋಕ ಮಲ್ಲಪ್ಪ ಮನಗೂಳಿ, ಜೆಡಿಎಸ್​ನಿಂದ ನಾಜಿಯಾ ಅಂಗಡಿ ಸೇರಿ ಆರು ಅರ್ಥಿಗಳು ಕಣದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net