ಹಂಗಾರಕಟ್ಟೆ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

rajya
Published on

ಕೋಟ: ಹಂಗಾರಕಟ್ಟೆ(ದೂಳಂಗಡಿ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಜ್ಞಾಸ ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಯಲ್ಲಿ ಶಾಲೆ ವಿದ್ಯಾರ್ಥಿಗಳ ಎರಡು ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿವೆ. ವಿದ್ಯಾರ್ಥಿಗಳಾದ ದಿಶಾಂತ್, ಕಾರ್ತಿಕ್, ಸ್ಕಂದ ಅವರ ಎರಡು ತಂಡ ರಾಷ್ಟ್ರಮಟ್ಟಕ್ಕೆ ಪ್ರವೇಶ ಪಡೆದಿದೆ. ಇದೇ ಬರುವ ಫೆಬ್ರವರಿಯಲ್ಲಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯುವ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಭಾಗವಹಿಸಲಿದ್ದು, ಶಾಲಾ ವಿಜ್ಞಾನ ಶಿಕ್ಷಕಿ ವೀಣಾ ಶೆಟ್ಟಿ ಮಾರ್ಗದರ್ಶನ ನೀಡಿದ್ದಾರೆ. ಮುಖ್ಯ ಶಿಕ್ಷಕ, ಅಧ್ಯಾಪಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net