

ಆಲ್ದೂರು: ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾದರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗೋಪಾಲಕೃಷ್ಣ ಹೇಳಿದರು.
ಹಂಗರವಳ್ಳಿ ಶಾಲೆಗೆ ಸೋಮವಾರ ಶ್ರೀ ಉದ್ದಂಡೇಶ್ವರ ಶಿಕ್ಷಣ ಸೇವಾ ಟ್ರಸ್ಟ್‌ನಿಂದ ಉಚಿತ ನೋಟ್‌ಬುಕ್ ಹಾಗೂ ಪಠ್ಯಪುಸ್ತಕ ವಿತರಿಸಿ ಮಾತನಾಡಿದರು. 2019ನೇ ಇಸವಿಯಲ್ಲಿ 13 ಮಕ್ಕಳಿಂದ ಪ್ರಾರಂಭವಾದ ಶಾಲೆ ಇಂದು 220 ಮಕ್ಕಳಿಗೆ ಆಂಗ್ಲಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವುದು ಪ್ರಶಂಸನೀಯ. ಸರ್ಕಾರದ ಸವಲತ್ತುಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಡಿಡಿಪಿಐ ಮಂಜುನಾಥ್, ಜಿಪಂ ಆರೋಗ್ಯ ಅಧಿಕಾರಿ ಡಾ. ಮಂಜುನಾಥ್, ಬಿಇಒ ಎಚ್.ಸಿ.ರವೀಶ್, ಉದ್ದಂಡೇಶ್ವರ ಟ್ರಸ್ಟ್ ಅಧ್ಯಕ್ಷ ಪ್ರದೀಶ್ ಇತರರಿದ್ದರು.