

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೂರಗುಂದ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ನಾಗಪ್ಪ ರಾಮಪ್ಪ ಪೂಜಾರ (32) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 10 ಲಕ್ಷ ರೂ.ಗೂ ಅಧಿಕ ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.