

ಹಾವೇರಿ: ಮೂಲವ್ಯಾದಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಬಸವೇಶ್ವರ ನಗರದಲ್ಲಿ ನಡೆದಿದೆ.
ಶಿವಲಿಂಗಪ್ಪ ಮಲ್ಲಪ್ಪ ಕರ್ಜಗಿ (46) ಮೃತ ವ್ಯಕ್ತಿ.
ಈತ ಮೂಲವ್ಯಾದಿ ಸಮಸ್ಯೆಯಿಂದ ಬಳಲುತ್ತಿದ್ದ. ಆಸ್ಪತ್ರೆಗೆ ತೋರಿಸಿದರೂ ಗುಣವಾಗದ ಕಾರಣ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.