

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ನಡೆಯಲಿರುವ ಹನುಮಮಾಲೆಯ ಸಂಕೀರ್ತನಾ ಯಾತ್ರೆ ಅಂಗವಾಗಿ ನಗರದ ನಾಡಪ್ರಭು ಕೆಂಪೇಗೌಡ ಉದ್ಯಾನದಲ್ಲಿರುವ ವೀರಾಂಜನೇಯಸ್ವಾಮಿ ದೇವಾಲಯದ ಬಳಿ ಹನುಮ ರಥಯಾತ್ರೆಗೆ ಚಾಲನೆ ನೀಡಲಾಯಿತು.
ಬಿಜೆಪಿ ಯುವ ಮುಖಂಡ ಅಶೋಕ್ ಜಯರಾಂ ಮಾತನಾಡಿ, ಹನುಮಾಲೆಯ ಸಂಕೀರ್ತನಾ ಯಾತ್ರೆಯ ಅಂಗವಾಗಿ ರಥ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಈ ರಥ ಎರಡು ದಿನಗಳ ಕಾಲ ಮಂಡ್ಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸಂಚರಿಸಲಿದೆ. ಡಿ.4ರಂದು ಶ್ರೀರಂಗಪಟ್ಟಣದ ನಿಮಿಷಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೂಡಲಬಾಗಿಲು ಆಂಜನೇಯಸ್ವಾಮಿ ದೇವಾಲಯ ತಲುಪಲಿದೆ. ಹಿಂದು ಜಾಗರಣ ವೇದಿಕೆ, ಬಿಜೆಪಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಸೇರಿದಂತೆ ಸುಮಾರು 8-10 ಸಾವಿರ ಜನರು ಸಮಾವೇಶಕ್ಕೆ ತೆರಳಲಿದ್ದಾರೆ. ಅಂತೆಯೇ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಹನುಮ ಮಾಲೆ ಧರಿಸಿ ಸಂಕೀರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಮುಖಂಡ ಡಾ.ಸದಾನಂದ ಮಾತನಾಡಿ, ಶ್ರೀರಂಗಪಟ್ಟಣದಲ್ಲಿರುವ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಾಲಯವನ್ನು ಮರುನಿರ್ಮಾಣ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಾಗಿದೆ ಎಂದರು.
ಮುಖಂಡರಾದ ವಿವೇಕ್, ಅರವಿಂದ್, ಹನುಮಂತ, ಹರ್ಷ, ಅರುಣ್‌ಕುಮಾರ್, ಚಾಮರಾಜು, ರಾಜೇಶ, ರಮೇಶ, ಪುಟ್ಟಸ್ವಾಮಿ, ಪ.ನಾ.ಸುರೇಶ, ನಿತ್ಯಾನಂದ ಇತರರಿದ್ದರು.