

ಮದ್ದೂರು : ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಹನುಮದ್ ವ್ರತದ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮುಂಜಾನೆಯಿಂದಲೇ ದೇವರಿಗೆ ಮಹಾ ಮಂಗಳಾರತಿ, ಅಭಿಷೇಕ, ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆ 11ರಿಂದ ಸೀತಾ, ರಾಮ, ಲಕ್ಷ್ಮಣ ಮತ್ತು ಹನುಮಂತರ ಉತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಉತ್ಸವದಲ್ಲಿ ಭಾಗಿಯಾದ ಭಕ್ತರು ಧನ್ಯತಾ ಭಾವ ಮೆರೆದರು. ಸಮಾಜ ಸೇವಕಿ ವಿನುತಾ ಕೆ.ಎಂ.ಉದಯ್ ಅವರು ಉತ್ಸವದಲ್ಲಿ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕ ಪ್ರದೀಪ ಆಚಾರ್ಯ ಧಾರ್ಮಿಕ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಆಗಮಿಸಿದ ಸಹಸ್ರಾರು ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ ಮಾಡಲಾಯಿತು. ವಿಶೇಷ ಪೂಜೆ: ಪಟ್ಟಣದ ಪೇಟೆಬೀದಿಯಲ್ಲಿರುವ ಆಂಜನೇಯಸ್ವಾಮಿ ದೇಗುಲದಲ್ಲಿ ಭಾನುವಾರ ವಿಶೇಷ ಪೂಜಾ