

ಪುತ್ತೂರು ಗ್ರಾಮಾಂತರ: ಈಶ್ವರಮಂಗಲದ ಹನುಮಗಿರಿ ಕ್ಷೇತ್ರ ಜಾತ್ರೆ ಶನಿವಾರ ಸಂಪನ್ನಗೊಂಡಿತು. ಶನಿವಾರ ಬೆಳಗ್ಗೆ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಧ್ಯಾಹ್ನ ಪ್ರಸಾದ ವಿತರಣೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು.
ಏ.10ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಉಗ್ರಾಣ ತುಂಬಿಸುವುದು, ರಾತ್ರಿ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವವಾನ ರಥೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಶುಕ್ರವಾರ ಬೆಳಗ್ಗೆ 10ರಿಂದ ನಾಗತಂಬಿಲ, ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ತಾಯಂಬಕ ಸೇವೆ, ಮಹಾಪೂಜೆ, ಶ್ರೀದೇವರ ಬಲಿ ಹೊರಡುವುದು, ಉತ್ಸವ ಬಲಿ, ಬೇಡಿ ಸೇವೆ, ಕಟ್ಟೆಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಪಾಲ್ಗೊಂಡರು. ಆಡಳಿತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.