ನಂಜನಗೂಡಿನಲ್ಲಿ ಅದ್ದೂರಿ ಹನುಮ ಜಯಂತಿ

Oplus_16908288
ನಂಜನಗೂಡಿನ ಶ್ರೀ ವೀರಾಂಜನೇಯ ಧರ್ಮ ಜಾಗೃತಿ ಬಳಗದಿಂದ ಆಯೋಜಿಸಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಇಮ್ಮಡಿ ಸಿದ್ಧಲಿಂಗ ಸ್ವಾಮೀಜಿ ಹಾಗೂ ಅರುಣ್ ಶ್ಯಾಮ್ ಜಿ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
Published on

ನಂಜನಗೂಡು : ನಗರದ ಶ್ರೀ ವೀರಾಂಜನೇಯ ಧರ್ಮ ಜಾಗೃತಿ ಬಳಗದಿಂದ ಪಟ್ಟಣದಲ್ಲಿ ಶನಿವಾರ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯೊಂದಿಗೆ ಆಚರಿಸಲಾಯಿತು.

ನಗರದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಮಲ್ಲನ ಮೂಲೆ ಮಠದ ಕಿರಿಯಶ್ರೀ ಶ್ರೀ ಇಮ್ಮಡಿ ಸಿದ್ದಲಿಂಗ ಸ್ವಾಮೀಜಿ ಹಾಗೂ ಹಿಂದುಪರ ಸಂಘಟನೆ ಹೋರಾಟಗಾರ ಅರುಣ್ ಶಾಮ್ ಜಿ ಆಂಜನೇಯನ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮೆರವಣಿಗೆ ನನಗರದ ರಾಷ್ಟ್ರಪತಿ ರಸ್ತೆಯ ಮೂಲಕ ಚಿಂತಾಮಣಿ ಗಣಪತಿ ದೇವಸ್ಥಾನದಿಂದ ಹುಲ್ಲಹಳ್ಳಿ ವೃತ್ತದ ಮೂಲಕ ಮಹಾತ್ಮ ಗಾಂಧಿ ರಸ್ತೆಯ ಮೂಲಕ ಹೊರಟು ಶ್ರೀಕಂಠೇಶ್ವರ ಸ್ವಾಮಿ ದೇವಸ್ತಾನದಲ್ಲಿ ಕೊನೆಗೊಂಡಿತು. ಮೆರವಣಿಗೆಯಲ್ಲಿ ಬೃಹತ್ ಗಾತ್ರದ ರಾಮ ಮೂರ್ತಿ ಸೇರಿದಂತೆ ಗಾರಡಿ ಗೊಂಬೆ, ವೀರಗಾಸೆ, ಕಂಸಾಳೆ, ಪೂಜಾ ಕುಣಿತ, ಡೊಳ್ಳು ಕುಣಿತ, ಆಪರೇಷನ್ ಸಿಂಧೂರ ಸ್ಥಬ್ಧ ಚಿತ್ರ ಸೇರಿದಂತೆ 11ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಿದ್ದವು.

ನೂರಾರು ಸಂಖ್ಯೆಯಲ್ಲಿ ಯುವಕರು ಕೇಸರಿ ಧ್ವಜ ಹಿಡಿದು ಆಂಜನೇಯ ಎಂಬ ಘೋಷಣೆಗಳನ್ನು ಕೂಗುತ್ತಿದ್ದ ದೃಶ್ಯ ಕಂಡು ಬಂತು. ಮೆರವಣಿಗೆಯುದ್ದಕ್ಕೂ ಸಾರ್ವಜನಿಕರು ಪೂಜೆ ನೆರವೇರಿಸಿದರು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಭಕ್ತರು ಮಜ್ಜಿಗೆ, ಪಾನಕ, ಮೊಸರನ್ನ ವಿತರಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಠಾಣೆಯಿಂದ 7 ಡಿವೈಎಸ್ಪಿ, 20 ಎಸ್‌ಐ, 46 ಪಿಎಸ್‌ಐ, 850 ಪೊಲೀಸ್ ಪೇದೆಗಳನ್ನು ನಿಯೋಜನೆ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net