

ಅರಕಲಗೂಡು: ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ಶನಿವಾರ ಸಂಜೆ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಗ್ರಾಮವನ್ನು ಕೆಸರಿ ಬಾವುಟ ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಬಣ್ಣ ಬಣ್ಣದ ವಿದ್ಯುತ್ ಬೆಳಕಿನಿಂದ ಕಂಗೊಳಿಸುತ್ತಿದ್ದ ಅಲಂಕೃತ ವಾಹನದ ಮೇಲೆ ಶ್ರೀ ಆಂಜನೇಯ ಮೂರ್ತಿಯನ್ನು ಕೂರಿಸಿ ಮೆರವಣಿಗೆ ನಡೆಸಲಾಯಿತು. ಹನುಮಂತನ ಮೆರವಣಿಗೆ ಮುಂದೆ ಸಾಗಿದ ಬೃಹತ್ ಶ್ರೀರಾಮನ ಮೂರ್ತಿ ಭಕ್ತರ ಕಣ್ಮನ ಸೆಳೆಯಿತು. ಮೆರವಣಿಗೆಯಲ್ಲಿ ಯುವಕರು ಕುಣಿದು ಸಂಭ್ರಮಿಸಿದರು. ಉತ್ಸವ ಸಾಗುವ ವೇಳೆ ಗ್ರಾಮಸ್ಥರು ಈಡುಗಾಯಿ ಅರ್ಪಿಸಿ ಪೂಜೆ ಸಲ್ಲಿಸಿದರು. ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.