ಋತುಚಕ್ರದ ಬಗ್ಗೆ ಮುಕ್ತ ಚರ್ಚೆ ಅಗತ್ಯ- ಜಿಪಂ ನೈರ್ಮಲ್ಯ ವಿಭಾಗದ ಸಮಾಲೋಚಕಿ ಬಸಮ್ಮ ಅಭಿಪ್ರಾಯ

Hanumasagara GP Meeting
ಹನುಮಸಾಗರ ಗ್ರಾಪಂ ಕಚೇರಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಋತುಚಕ್ರ ಕುರಿತ ಸಮಾಲೋಚನಾ ಸಭೆಯಲ್ಲಿ ಜಿಪಂ ನೈರ್ಮಲ್ಯ ವಿಭಾಗದ ಜಿಲ್ಲಾ ಸಮಾಲೋಚಕಿ ಬಸಮ್ಮ ಮಾತನಾಡಿದರು.
Published on

ಹನುಮಸಾಗರ: ಋತುಚಕ್ರದ ಬಗ್ಗೆ ಪುರುಷರಿಗೆ ಮಾಹಿತಿ ಇದ್ದರೆ ಮಹಿಳೆಯರು ಅನುಭವಿಸುವ ತೊಂದರೆಗಳ ಬಗ್ಗೆ ತಿಳಿಯಲಿದೆ ಎಂದು ಜಿಪಂ ನೈರ್ಮಲ್ಯ ವಿಭಾಗದ ಜಿಲ್ಲಾ ಸಮಾಲೋಚಕಿ ಬಸಮ್ಮ ಹೇಳಿದರು.

ಗ್ರಾಪಂ ಕಚೇರಿಯಲ್ಲಿ ಗುರುವಾರ ಋತುಚಕ್ರ ಕುರಿತ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಆಧುನಿಕ ಯುಗದಲ್ಲಿಯೂ ಮಹಿಳೆಯರು ಹಳೆಯ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ. ಋತುಚಕ್ರದ ವೇಳೆ ಎದುರಾಗುವ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ಹಿಂಜರಿಯುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಹರೆಯದ ಹೆಣ್ಣು ಮಕ್ಕಳಿಗೆ ಋತುಚಕ್ರದ ತ್ಯಾಜ್ಯ ನಿರ್ವಹಣೆ, ವೈಯಕ್ತಿಕ ಸ್ವಚ್ಛತೆ, ಆರೋಗ್ಯಕರ ಆಹಾರ ಸೇವನೆ ಬಗ್ಗೆ ಮಾಹಿತಿ ನೀಡಬೇಕಾಗಿದೆ ಎಂದರು.

ವೈದ್ಯಾಧಿಕಾರಿ ವಿನಾಯಕ ಪಟ್ಟಣಶೆಟ್ಟಿ, ತಾಪಂ ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ, ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ನಾಗಪ್ಪ ನಿರ್ವಾಣಿ, ಉಪಾಧ್ಯಕ್ಷ ಮಂಜುನಾಥ ಹುಲ್ಲೂರು, ಜಿಲ್ಲಾ ಸಮಾಲೋಚಕ ರಾಮಣ್ಣ ಬಂಡಿಹಾಳ, ಪಿಡಿಒ ನಿಂಗಪ್ಪ ಮೂಲಿಮನಿ, ಆರೋಗ್ಯ ಸಹಾಯಕ ನಿಜಾಮುದ್ದೀನ್ ಗಂಜಿಕೋಟೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net