ಹನುಮಂತಪ್ಪ ಅಂಡಗಿ ನಿಧನ

Hanumantappa andagi died koppal
Published on

ಕೊಪ್ಪಳ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್​ ಅಧ್ಯಕ್ಷ ಹನುಮಂತಪ್ಪ ಅಂಡಗಿ(53) ಅನಾರೋಗ್ಯದಿಂದ ಬುಧವಾರ ನಿಧನರಾದರು. ಸಿಂದೋಗಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು. ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದರು. ಮೃತರಿಗೆ ಹಲವು ಗಣ್ಯರು, ಸಾಹಿತಿ ಬಳಗ, ಅಧಿಕಾರಿ ವರ್ಗ ಸಂತಾಪ ಸೂಚಿಸಿದೆ. ಕೊಪ್ಪಳ ತಾಲೂಕಿನ ಚಿಲವಾಡಗಿ ಗ್ರಾಮದಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net