ಭಗೀರಥ ಮಹರ್ಷಿ ಗಂಗೆಯನ್ನು ಭೂಮಿಗೆ ತಂದ ಛಲಗಾರ

HANUMASAGARA-BHAGEERATHA-JAYANTHI
ಹನುಮಸಾಗರ ಗ್ರಾಪಂ ಕಚೇರಿಯಲ್ಲಿ ಭಗೀರಥ ಮಹರ್ಷಿ ಜಯಂತಿ ಗುರುವಾರ ಆಚರಿಸಲಾಯಿತು. ಪಿಡಿಒ ದೇವೇಂದ್ರಪ್ಪ ಕಮತರ, ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ನಾಗಪ್ಪ ನಿರ್ವಾಣಿ, ಉಪಾಧ್ಯಕ್ಷ ಮಂಜುನಾಥ ಹುಲ್ಲೂರು ಇತರರಿದ್ದರು.
Published on

ಹನುಮಸಾಗರ: ಭಗೀರಥ ಮಹರ್ಷಿ, ಘೋರ ತಪಸ್ಸಿನ ಮೂಲಕ ಗಂಗೆಯನ್ನು ಭೂಮಿಗೆ ತಂದ ಛಲಗಾರ ಎಂದು ಪಿಡಿಒ ದೇವೇಂದ್ರಪ್ಪ ಕಮತರ ಹೇಳಿದರು.

ಇಲ್ಲಿನ ಗ್ರಾಪಂ ಕಚೇರಿಯಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಲೋಕ ಕಲ್ಯಾಣಕ್ಕಾಗಿ ಭಗೀರಥರು ಶ್ರಮಿಸಿದ್ದಾರೆ. ಯುವಕರು ಮಹರ್ಷಿಯ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗುರಿ ಸಾಧನೆಗೆ ಛಲ ತೋಡಬೇಕು ಎಂದರು.

ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ನಾಗಪ್ಪ ನಿರ್ವಾಣಿ, ಉಪಾಧ್ಯಕ್ಷ ಮಂಜುನಾಥ ಹುಲ್ಲೂರು, ಗ್ರಾಮದ ಹಿರಿಯರು, ಯುವಕರು, ಗ್ರಾಪಂ ಸಿಬ್ಬಂದಿ ಇದ್ದರು. ಸಮೀಪದ ಮಾವಿನ ಇಟಗಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲೂ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಮುಖ್ಯಶಿಕ್ಷಕ ಖಾಜಾಹುಸೇನ ಒಂಟೆಳಿ, ಶಿಕ್ಷಕರು ಮತ್ತು ಮಕ್ಕಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net