ಪ್ರವಾಹದಿಂದ ತೊಂದರೆ ಆಗದಂತೆ ಕ್ರಮ; ಡಿಸಿಎಂ ಗೋವಿಂದ ಕಾರಜೋಳ ಭರವಸೆ

17082020 Hanumasagar DCM Govind Karjola
Published on

ಹನುಮಸಾಗರ: ಪ್ರವಾಹದಿಂದ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಪಟ್ಟಣದ ಮಿಯಾಪುರ ಕ್ರಾಸ್ ಬಳಿ ಸೋಮವಾರ ಇಂದಿರಾ ಗಾಂಧಿ ವಸತಿ ಶಾಲೆ (ಪಪಂಗಡ) ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನದಿ ತೀರದ ಜನರಿಗೆ ಬೇರೆಡೆ ತೆರಳುವಂತೆ ಸೂಚಿಸಲಾಗಿದೆ. ಪ್ರವಾಹ ತೀರದ ಜಾನುವಾರಿಗೆ ಮೇವಿನ ವ್ಯವಸ್ಥೆ ಮಾಡಲಾಗುವುದು. ಪ್ರವಾಹ ಕಡಿಮೆಯಾದ ನಂತರ ಸಮೀಕ್ಷೆ ಮಾಡಿಸಿ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗುವುದು. ಕಳೆದ ವರ್ಷ ಎಲ್ಲರಿಗೂ ಪರಿಹಾರ ನೀಡಲಾಗಿದೆ. ಕೆಲವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು.

ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ, ಜಿಲ್ಲಾಧಿಕಾರಿ ಎಸ್. ವಿಕಾಸ್ ಕಿಶೋರ್, ಸಂಸದ ಸಂಗಣ್ಣ ಕರಡಿ, ಶಾಸಕ ಅಮರೇಗೌಡ ಪಾಟೀಲ್ ಬಯ್ಯಪೂರ, ತಾಪಂ ಅಧ್ಯಕ್ಷೆ ಮಹಾಂತಮ್ಮ ಪೂಜಾರ, ಜಿಪಂ ಸದಸ್ಯ ಭೀಮಣ್ಣ ಅಗಸಿಮುಂದಿನ, ತಾಪಂ ಸದಸ್ಯೆ ಶಕೀಲಾ ಆಸಿಫ್ ಡಾಲಾಯತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net