

ಹನುಮಸಾಗರಲ್ಲಿ ನಿಗದಿಯಾಗಿದ್ದ 12ನೇ ನುಡಿ ಹಬ್ಬ
ಹನುಮಸಾಗರ: ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಏ.1 ಮತ್ತು 2 ರಂದು ನಡೆಸಲು ಉದ್ದೇಶಿಸಿದ್ದ ಕೊಪ್ಪಳ ಜಿಲ್ಲಾ ಮಟ್ಟದ 12ನೇ ಕನ್ನಡ ಸಾಹಿತ್ಯ ಸಮೇಳನವನ್ನು ಕರೋನಾ ಎರಡನೇ ಅಲೆಯಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಜಿಲ್ಲಾ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿದೆ. ಸಮ್ಮೇಳನದ ಪ್ರತಿನಿಧಿಗಳಿಗೆ ಬ್ಯಾಗ್ ವಿತರಣೆ ಸೇರಿ ಇತರ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಪೆಂಡಾಲ್ ಹಾಕುವ ಕೆಲಸ ಕೂಡ ಆರಂಭಿಸಲಾಗಿತ್ತು. ಪಟ್ಟಣದಲ್ಲಿ ಭಾನುವಾರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಗೆ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಕರೊನಾ ತೀವ್ರತೆಯಿಂದಾಗಿ ಸಮ್ಮೇಳನಕ್ಕೆ ಜಿಲ್ಲಾಡಳಿತ ಅನುಮತಿ ನೀಡುವ ಬಗ್ಗೆ ಹಾಗೂ ಗ್ರಾಮಸ್ಥರ ಆರೋಗ್ಯದ ಹಿತದೃಷ್ಠಿಯಿಂದ ಸಮ್ಮೇಳನ ನಡೆಸುವ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಸಮ್ಮೇಳನ ಮುಂದೂಡುವ ತೀರ್ಮಾನ ಕೈಗೊಳ್ಳುತ್ತಿದ್ದಂತೆ ಸಮ್ಮೇಳನದ ಪೆಂಡಾಲ್ ತೆರವುಗೊಳಿಸುವ ಕೆಲಸಕ್ಕೆ ಚಾಲನೆ ನೀಡಲಾಯಿತು.