ಸಾಮಾನ್ಯ ಕ್ಷೇತ್ರಕ್ಕೆ ಸಲ್ಲಿಕೆಯಾಗದ ನಾಮಪತ್ರ

GP
Published on

ಹನುಮಸಾಗರ: ಸಮೀಪದ ಹಿರೇಗೊಣ್ಣಾಗರ ಗ್ರಾಪಂ ವ್ಯಾಪ್ತಿ ನರಸಾಪೂರದ ಗ್ರಾಪಂ ಚುನಾವಣೆಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಿದ್ದ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗದಿರುವುದು ವಿಶೇಷವಾಗಿದೆ.

ಚುನಾವಣೆ ನಿಯಮದಂತೆ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ ಅಭ್ಯರ್ಥಿ ಮೀಸಲು ಸ್ಥಾನಕ್ಕೆ ಸ್ಪರ್ಧಿಸಿದವರಿಗಿಂತ ಹೆಚ್ಚು ಮತ ಪಡೆದರೆ ಮಾತ್ರ ಗೆಲವು. ಈ ನಿಯಮದಿಂದಾಗಿ ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಲು ನರಸಾಪುರ ಗ್ರಾಮಸ್ಥರು ಹಿಂದೇಟು ಹಾಕಿದ್ದಾರೆ. ಗ್ರಾಮದ ಮೂರು ಸದಸ್ಯ ಸ್ಥಾನಗಳಿಗೆ ಒಂದು ಸಾಮಾನ್ಯ ವರ್ಗ, ಹಿಂದುಳಿದ ವರ್ಗ ಅ (ಮಹಿಳೆ) ಮತ್ತು ಸಾಮಾನ್ಯ ಮಹಿಳೆ.

ಹಿಂದುಳಿದ ವರ್ಗ ಅ ಮಹಿಳೆ ಸ್ಥಾನಕ್ಕೆ ಎಂಟು, ಸಾಮಾನ್ಯ ಮಹಿಳೆ ಸ್ಥಾನಕ್ಕೆ ಒಂದು ನಾಮಪತ್ರ ಸಲ್ಲಿಕೆಯಾಗಿದ್ದು, ಸಾಮಾನ್ಯ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ, ಹಿಂಪಡೆಯುವ ಕಾರ್ಯ ಮುಕ್ತಾಯಗೊಂಡಿದ್ದು, ಎರಡು ಸ್ಥಾನಕ್ಕೆ ಒಂಬತ್ತು ನಾಮಪ್ರಗಳು ಸಲ್ಲಿಕೆಯಾಗಿವೆ. ಆದರೆ, ಸಾಮಾನ್ಯ ಕ್ಷೇತ್ರಕ್ಕೆ ಮಾತ್ರ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net