ಹನುಮಸಾಗರ ಚಂದಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗುವ ಜನರಿಗೆ ತೊಂದರೆ ನೀಡುತ್ತಿದ್ದ ಕೋತಿ ಸೆರೆ

28112022 hanumasagar monkey capture
Published on

ಹನುಮಸಾಗರ: ಇಲ್ಲಿನ ಚಂದಾಲಿಗೇಶ್ವರ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆ ಹಿಡಿದರು. ನಿತ್ಯ ಬೆಳಗ್ಗೆ ವಾಯುವಿಹಾರಕ್ಕೆ ಹೋಗುವವರಿಗೆ ಕೋತಿ ಉಪಟಳ ನೀಡುತ್ತಿತ್ತು. ಹೀಗಾಗಿ ಜನರು ಈ ರಸ್ತೆಯಲ್ಲಿ ಹೋಗಲು ಹಿಂದೇಟು ಹಾಕುವಂತಾಗಿತ್ತು. ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಮಂಗವನ್ನು ಸೆರೆ ಹಿಡಿದಿದೆ. ಅರಣ್ಯ ರಕ್ಷಕ ದಾನನಗೌಡ ಮಾಲಿಪಾಟೀಲ್, ಅರಣ್ಯ ವೀಕ್ಷಕ ನೀಲಪ್ಪ ಕುದರಿ, ನೌಕರ ಬಲವಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net