

ಹನುಮಸಾಗರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಅರ್ಹ ಫಲಾನುಭವಿಗಳಿಗೆ ಮಾಹಿತಿ ಒದಗಿಸಿ, ಸೌಲಭ್ಯ ಪಡೆದುಕೊಳುವಂತೆ ಮಾಡಬೇಕು ಎಂದು ಸಿಡಿಪಿಒ ಯಲ್ಲಮ್ಮ ಹಂಡಿ ಹೇಳಿದರು.
ಇಲ್ಲಿನ ಗ್ರಾಪಂ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮುಖ್ಯಮಂತ್ರಿಗಳ ಜಿಲ್ಲಾ ಕಾರ್ಯಕ್ರಮ ಅ.6ರಂದು ನಡೆಯಲಿದೆ. ಅದಕ್ಕೆ ವಾರ್ಡ್ ಪ್ರಕಾರ ಫಲಾನುಭವಿಗಳನ್ನು ಕರೆದುಕೊಂಡು ಹೋಗಬೇಕು. ಅಲ್ಲಿ ವಿವಿಧ ಯೋಜನೆಗಳ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಆಗಮಿಸುವ ಫಲಾನುಭವಿಗಳಿಗೆ ಉಪಹಾರ, ಊಟದ ವ್ಯವಸ್ಥೆ ಇರುತ್ತದೆ. ಆದ್ದರಿಂದ ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಆಯ್ಕೆಮಾಡಿಕೊಂಡು ಜವಾಬ್ದಾರಿಯಿಂದ ಕರೆದುಕೊಂಡು ಬರಬೇಕೆಂದು ತಿಳಿಸಿದರು.ಪಿಡಿಒ ನಿಂಗಪ್ಪ ಮೂಲಿಮನಿ ಮಾತನಾಡಿದರು.
ಶಿಕ್ಷಕರಾದ ರಾಮಚಂದ್ರ ಬಡಿಗೇರ, ಶಿವಪ್ಪ ಕಮ್ಮಾರ, ಬಸಪ್ಪ ಬಂಡಿವಡ್ಡರ, ಬಸವರಾಜ ವಡ್ಡರ, ಎಸ್‌ಡಿಎ ವೀರನಗೌಡ ಪಾಟೀಲ್, ಮಹಾಂತಯ್ಯ ಕೋಮಾರಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.