ಪಠ್ಯೆತರ ಚಟುವಟಿಕೆಗೂ ಪ್ರಾಧಾನ್ಯತೆ ನೀಡಿ

INAGURATION
ಹನುಮಸಾಗರದಲ್ಲಿ ಸೋಮವಾರ ಒಳಾಂಗಣ ಕ್ರೀಡಾಂಗಣವನ್ನು ಶಾಸಕ ದೊಡ್ಡನಗೌಡ ಎಚ್.ಪಾಟೀಲ ಉದ್ಘಾಟಿಸಿದರು. ಕಾಡಾ ಅಧ್ಯಕ್ಷ ಹಸನ್‌ಸಾಬ ದೋಟಿಹಾಳ, ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ, ಉಪಾಧ್ಯಕ್ಷೆ ಹನುಮವ್ವ ಕಂದಗಲ್, ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಬಸವರಾಜ ಹಳ್ಳೂರು, ಮುಖಂಡ ಮಲ್ಲಣ್ಣ ಪಲ್ಲೆದ ಇತರರಿದ್ದರು.
Published on

ಹನುಮಸಾಗರ: ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಯುವ ಜನತೆ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಎಚ್.ಪಾಟೀಲ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿ ಮಾತನಾಡಿದರು. ಯುವಕರು ಒಳಾಂಗಣ ಕ್ರೀಡಾಂಗಣದ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಓದಿನ ಜತೆ ಪಠ್ಯೆತರ ಚಟುವಟಿಕೆಗಳಿಗೂ ಪ್ರಾಧಾನ್ಯತೆ ನೀಡಬೇಕು. ಕ್ರೀಡೆಯಲ್ಲಿ ಪಾಲ್ಗೊಳುವುದರಿಂದ ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚುತ್ತದೆ. ನಿರಂತರ ಅಭ್ಯಾಸ ಮಾಡಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಬೇಕು. 1.55 ಕೋಟಿ ರೂ. ವೆಚ್ಚದಲ್ಲಿ ಲ್ಯಾಂಡ್ ಆರ್ಮಿ ಅವರು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಿದ್ದಾರೆ. ಇದಕ್ಕೆ ನೆರವಾದ ರಾಜ್ಯ ಜಂಪ್‌ರೋಪ್ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು. ಇದೇ ವೇಳೆ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪದವಿ ಪೂರ್ವ ಕಾಲೇಜಿನ ಕೊಠಡಿಗಳು ಹಾಗೂ ಮೂರನೇ ವಾರ್ಡ್‌ನಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವ 3ನೇ ಅಂಗನವಾಡಿ ಕೇಂದ್ರ ಉದ್ಘಾಟಿಸಿದರು.

ಕಾಡ ಅಧ್ಯಕ್ಷ ಹಸನ್‌ಸಾಬ ದೋಟಿಹಾಳ, ಪಿಡಿಒ ದೇವೇಂದ್ರ ಕಮತರ, ಗ್ರಾಪಂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೀರನಗೌಡ ಪಾಟೀಲ, ಅಧ್ಯಕ್ಷ ರುದ್ರಗೌಡ ಗೌಡಪ್ಪನವರ, ಉಪಾಧ್ಯಕ್ಷೆ ಹನುಮವ್ವ ಕಂದಗಲ, ಸದಸ್ಯರಾದ ಶಂಕ್ರಮ್ಮ ನಿರ್ವಾಣಿ, ಮಂಜುನಾಥ ಹುಲ್ಲೂರು, ಶಿವಪ್ಪ ಕಂಪ್ಲಿ, ಶ್ರೀಶೈಲ ಮೋಟಗಿ, ಮಹಮ್ಮದ್ದ ರಿಯಾಜ್ ಖಾಜಿ, ಬಸವರಾಜ ಬಿಲ್ಕಾರ, ಚಂದ್ರು ಬೆಳಗಲ್, ಮರೇಗೌಡ ಬೊರೂರ, ಬಿಜೆಪಿ ಮಾಜಿ ತಾಲೂಕಾಧ್ಯಕ್ಷ ಬಸವರಾಜ ಹಳ್ಳೂರ, ಜಂಪ್‌ರೊಪ್ ರಾಷ್ಟ್ರೀಯ ಖಜಾಂಚಿ ರೇಣುಕಾ ಪುರದ, ಜಂಪ್‌ರೊಪ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಟೈಲರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net