ಸಮಾಜದಲ್ಲಿ ಒಳ್ಳೆಯವರಾಗಿ ಬದುಕು ಸಾಗಿಸಿ: ರೌಡಿಶೀಟರ್‌ಗಳಿಗೆ ಪಿಎಸ್‌ಐ ಪಾಠ

03072022 hanumasagar police
Published on

ಹನುಮಸಾಗರ: ಸಮಾಜದಲ್ಲಿ ಶಾಂತಿ ಕದಡುವ ಕಾರ್ಯಕ್ಕೆ ಮುಂದಾದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಪಿಎಸ್‌ಐ ಅಶೋಕ ಬೇವೂರ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ರೌಡಿಶೀಟರ್‌ಗಳ ಪರೇಡ್ ನಡೆಸಿ ಮಾತನಾಡಿದರು. ಯಾವುದೋ ಕೆಟ್ಟ ಗಳಿಗೆಯಲ್ಲಿ ತಪ್ಪು ಮಾಡಿರುತ್ತಿರಿ. ಅದನ್ನೇ ಮುಂದುವರೆಸಿಕೊಂಡು ಹೋಗಬಾರದು. ಕುಟುಂಬದವರು ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ತಂದೆ-ತಾಯಿಗಳಿಗೆ ಹೆಸರು ತರಬೇಕು. ಪ್ರತಿಯೊಬ್ಬರೂ ಉತ್ತಮ ಜೀವನ ನಡೆಸಬೇಕು. ಪೊಲೀಸ್ ಇಲಾಖೆ ಗಮನಿಸುತ್ತಿರುತ್ತದೆ. ಆದ್ದರಿಂದ ಕಳೆದು ಹೋದ ಸಮಯವನ್ನು ನೆನಪಿಸಿಕೊಂಡು ಉಪಯೋಗವಿಲ್ಲ. ಆದ್ದರಿಂದ ಸಮಾಜದಲ್ಲಿ ಒಳ್ಳೆಯ ಮನುಷ್ಯರಾಗಿ ಬಾಳುವುದನ್ನು ಕಲಿಯಬೇಕು. ಉತ್ತಮ ನಡೆ ಕಂಡುಬಂದರೆ ರೌಡಿಶೀಟರ್ ಪಟ್ಟಿಯಿಂದ ಹೆಸರು ತಗೆದು ಹಾಕಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net