ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸಲಿ

academic meeting
ಹನುಮಸಾಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿದ್ದ ಮೌಲಾನಾ ಆಜಾದ್ ಶಾಲೆ ಉದ್ಘಾಟನೆ, ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಶೈಕ್ಷಣಿಕ ಸಭೆಯನ್ನು ವಿಧಾನಸಭೆ ವಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಎಚ್.ಪಾಟೀಲ್ ಉದ್ಘಾಟಿಸಿದರು. ಭೂ ದಾನಿ ಸೈಯ್ಯದ್ ಮುರ್ತುಜಾ ಖಾದ್ರಿ, ಎಸ್ಡಿಎಂಸಿ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣನವರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ ಅಲಿ, ಬಿಇಒ ಸುರೇಂದ್ರ ಕಾಂಬಳೆ ಇತರರಿದ್ದರು.
Published on

ಹನುಮಸಾಗರ: ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಅನುಭವಿ ಶಿಕ್ಷಕರಿದ್ದಾರೆ. ಆದರೂ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಂಠಿತವಾಗುತ್ತಿದೆ. ಕಾರಣವೇನು ಎಂಬುದನ್ನು ಶಿಕ್ಷಕರು ಅವಲೋಕನ ಮಾಡಿಕೊಳ್ಳಬೇಕು ಎಂದು ವಿಧಾನಸಭೆ ವಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಎಚ್.ಪಾಟೀಲ್ ಹೇಳಿದರು.

ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಸೋಮವಾರ ಮೌಲಾನಾ ಆಜಾದ್ ಶಾಲೆ ಉದ್ಘಾಟನೆ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಶೈಕ್ಷಣಿಕ ಸಭೆ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಬೋಧನೆ ಮಾಡಿ ಮಕ್ಕಳು ಕಲಿಕೆಯಲ್ಲಿ ಆಸಕ್ತಿ ವಹಿಸುವಂತೆ ಮಾಡಬೇಕು ಎಂದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಎಲ್ಲ ಶಿಕ್ಷಕರು ಶ್ರಮಿಸಬೇಕು. ಶಾಲೆಗೆ ಮೌಲಸೌಲಭ್ಯಗಳು ಕೊರತೆಯಾದಂತೆ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲು ಸಿದ್ಧನಿದ್ದೇನೆ. ಅವಶ್ಯಕವಾಗಿ ಏನಾದರೂ ಬೇಕಾದರೆ ಶಿಕ್ಷಕರು ತಿಳಿಸಬೇಕು. ಈ ವರ್ಷವಾದರೂ ಮಕ್ಕಳ ಫಲಿತಾಂಶದಲ್ಲಿ ಸುಧಾರಣೆ ಕಾಣಬೇಕು ಎಂದು ಆಶಿಸಿದರು.

ಭೂದಾನಿ, ಮುಸ್ಲಿಂ ಧರ್ಮಗುರು ಸೈಯ್ಯದ್ ಮುರ್ತುಜಾ ಖಾದ್ರಿ ಸಾನ್ನಿಧ್ಯ ವಹಿಸಿದ್ದರು. ಕೆಪಿಎಸ್ ಎಸ್ಡಿಎಂಸಿ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣನವರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅಜ್ಮೀರ ಅಲಿ, ಬಿಇಒ ಸುರೇಂದ್ರ ಕಾಂಬಳೆ, ಉಪನ್ಯಾಸಕ ಭೀಮಪ್ಪ ಗೊಲ್ಲರ, ಸಿಆರ್‌ಸಿ ಲೆಂಕೆಪ್ಪ ವಾಲೀಕಾರ, ಮುಖಂಡರಾದ ಬಸವರಾಜ ಹಳ್ಳೂರ, ಸೂಚಪ್ಪ ದೇವರಮನಿ, ಬಸವರಾಜ ಬಾಚಲಾಪುರ, ವಿಶ್ವನಾಥ ನಾಗೂರ, ಎಸ್ಡಿಎಂಸಿ ಪದಾಧಿಕಾರಿಗಳು, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net