ಸದಸ್ಯರ ಒಗ್ಗಟ್ಟಿನಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ

1408 Hanumasagara Aashraya mane Hakkupatra
ಹನುಮಸಾಗರ ಪಂಚಾಯಿತಿ ಕಟ್ಟೆಯಲ್ಲಿ ಗುಂಪು ಆಶ್ರಯ ಮನೆಗಳ ನಿವೇಶನ ಫಲಾನುಭವಿಗಳಿಗೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಶುಕ್ರವಾರ ಹಕ್ಕುಪತ್ರಗಳನ್ನು ವಿತರಿಸಿದರು.
Published on

ಹನುಮಸಾಗರ: ಗ್ರಾಪಂ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.

ಗ್ರಾಪಂ ಪಂಚಾಯಿತಿ ಕಟ್ಟೆಯಲ್ಲಿ ಫಲಾನುಭವಿಗಳಿಗೆ ಗುಂಪು ಆಶ್ರಯ ಮನೆಗಳ ನಿವೇಶನದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ಸದಸ್ಯರು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ. ರೈತರಿಗೆ ಅನುಕೂಲ ಆಗುವಂತೆ ನರೇಗಾದಡಿ ರಸ್ತೆಗಳನ್ನು ಅಭಿವೃದ್ಧಿ ಮಾಡಬೇಕು. ಸಿಸಿ ರಸ್ತೆ ಜತೆಗೆ ಚರಂಡಿ ನಿರ್ಮಿಸಬೇಕು. ಇದರಿಂದ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕೆಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net