ಪ್ಲಾಸ್ಟಿಕ್ ಮುಕ್ತಗೊಳಿಸಲು ಸಹಕರಿಸಲು ಪಿಡಿಒ ನಿಂಗಪ್ಪ ಮೂಲಿಮನಿ ಮನವಿ

Hanumasagara Plastic collection program
ಹನುಮಸಾಗರದಲ್ಲಿ ಧರ್ಮಜ್ಯೋತಿ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಶನಿವಾರ ಫ್ಲಾಸ್ಟಿಕ್ ಸಂಗ್ರಹ ಕಾರ್ಯಕ್ರಮ ಆಯೋಜಿಸಲಾಗಿತ್ತು.
Published on

ಹನುಮಸಾಗರ: ಊರನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ನಿವಾಸಿಗಳು ಸಹಕರಿಸಬೇಕೆಂದು ಪಿಡಿಒ ನಿಂಗಪ್ಪ ಮೂಲಿಮನಿ ಹೇಳಿದರು.

ಪ್ಲಾಸ್ಟಿಕ್ ಮುಕ್ತ ಭಾರತ ಯೋಜನೆಯಡಿ ಧರ್ಮಜ್ಯೋತಿ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಪ್ಲಾಸ್ಟಿಕ್ ಸಂಗ್ರಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ಲಾಸ್ಟಿಕ್ ನೀಡಿದಷ್ಟು ಪ್ರಮಾಣದ ಅಕ್ಕಿ ನೀಡಲಾಗುವುದು. ಸ್ವಚ್ಛತೆ ಕಾಪಾಡಿಕೊಂಡರೆ ಆರೋಗ್ಯ ವೃದ್ಧಿಸುವ ಜತೆಗೆ ಗ್ರಾಮದ ಸೌಂದರ್ಯವೂ ಹೆಚ್ಚುತ್ತದೆ ಎಂದರು. ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ನಿರ್ವಾಣಿ, ಉಪಾಧ್ಯಕ್ಷ ಮಂಜುನಾಥ ಹುಲ್ಲೂರು, ಸಂಜೀವಿನಿ ಒಕ್ಕೂಟದ ತಾಲೂಕು ಕೋ ಆರ್ಡಿನೇಟರ್ ಮಾದೇಗೌಡ ಪೊಲೀಸ್‌ಪಾಟೀಲ್, ಸದಸ್ಯೆ ಶಕುಂತಲಾ ಹಲಕೂಲಿ, ಗ್ರಾಪಂ ಲೆಕ್ಕ ಸಹಾಯಕ ವೀರನಗೌಡ ಪಾಟೀಲ್, ಮಂಜುನಾಥ ಶಿರೋಳ, ಗ್ರಾಪಂ ಸಿಬ್ಬಂದಿ ಹಾಗೂ ಮಹಿಳಾ ಸಂಘದ ಸದಸ್ಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net