ಸಮಾಜದ ಏಳಿಗೆಯಲ್ಲಿ ಕಲಾವಿದರ ಪಾತ್ರ- ಪ್ರವಚನಕಾರ ಸಿದ್ದಲಿಂಗ ದೇವರು ಅಭಿಪ್ರಾಯ

Hanumasagara Theater Day
ಹನುಮಸಾಗರದ ನಿಸರ್ಗ ಸಂಗೀತ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಣ ಸಂಯೋಜಕ ಮಹಾಂತೇಶ ಚೌಡಾಪುರ ಮಾತನಾಡಿದರು.
Published on

ಹನುಮಸಾಗರ: ರಂಗಭೂಮಿ ಕಲಾವಿದರು ಸಮಾಜದ ಏಳಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆಂದು ಪ್ರವಚನಕಾರ ಸಿದ್ದಲಿಂಗ ದೇವರು ಹೇಳಿದರು.

ಪಟ್ಟಣದ ನಿಸರ್ಗ ಸಂಗೀತ ಶಾಲೆಯಲ್ಲಿ ಶನಿವಾರ ವಿಶ್ವ ರಂಗಭೂಮಿ ದಿನದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ತಂತ್ರಜ್ಞಾನ ಯುಗದಲ್ಲಿ ಯಾಂತ್ರಿಕ ಬದುಕಿನಿಂದಾಗಿ ರಂಗಭೂಮಿ ಕಣ್ಮರೆಯಾಗುತ್ತಿದೆ. ಇದರಿಂದಾಗಿ ರಂಗಭೂಮಿ ಕಲಾವಿದರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕಲಾವಿದರು ಪಾತ್ರಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ರಂಗಭೂಮಿಗೆ ಪ್ರೋತ್ಸಾಹ ನೀಡಿ ಬೆಳೆಸಬೇಕಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net