ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಸಹಕರಿಸಿ

03 HANUR 4
Published on

ಹನೂರು : ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಸಹಕರಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗಾಗಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿಯೊಂದು ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಸಮಾರಂಭದಲ್ಲಿ ಭಾಗವಹಿಸುವ
ಮೂಲಕ ಅಚ್ಚುಕಟ್ಟಾಗಿ ಕಲಾಪಗಳನ್ನು ನಡೆಸಬೇಕು ಎಂದು ಹೇಳಿದರು. ಸಾರ್ವಜನಿಕರಿಗೆ ಶಾಮಿಯಾನ, ಕುಡಿಯುವ ನೀರು ಹಾಗೂ ತಾತ್ಕಾಲಿಕ ಶೌಚಗೃಹದ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರಿ ಕಟ್ಟಡಗಳಿಗೆ ಒಂದೇ ತೆರೆನಾದ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ತರುವ ನಿಟ್ಟಿನಲ್ಲಿ ಕೈಗೊ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net