ಯೂತ್ ಕಾಂಗ್ರೆಸ್ ಪದಾಕಾರಿಗಳ ಪ್ರತಿಭಟನೆ

17 HANUR 4
Published on

ಹನೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಸಚಿವ ಡಾ.ಅಶ್ವತ್ಥ ನಾರಾಯಣ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಶುಕ್ರವಾರ ಹನೂರಿನಲ್ಲಿ ಯೂತ್ ಕಾಂಗ್ರೆಸ್ ಪದಾಕಾರಿಗಳು ಪ್ರತಿಭಟನೆ ನಡೆಸಿದರು.


ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಾದೇಶ್ ಮಾತನಾಡಿ, ಸಚಿವ ಅಶ್ವತ್ಥನಾರಾಯಣ ಅವರು ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ರೀತಿ ಹೊಡೆದುರುಳಿಸಬೇಕು ಎಂದು ಹೇಳಿಕೆ ನೀಡಿರುವುದು ಖಂಡನೀಯ. ಉನ್ನತ ಸ್ಥಾನದಲ್ಲಿರುವ ಇವರು, ಇಂತಹ ಹೇಳಿಕೆ ನೀಡಿರುವುದು ಎಷ್ಟರ ಮಟ್ಟಿಗೆ ಸರಿ? ಇವರ ಗೌರವಕ್ಕೆ ಶೋಭೆ ತರುವುದಿಲ್ಲ. ಈ ಕೂಡಲೇ ಕ್ಷಮೆಯಾಚಿಸಬೇಕು. ಜತೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ನಜಿಜ್, ಟೌನ್ ಅಧ್ಯಕ್ಷ ಮಂಜೇಶ್, ಪದಾಕಾರಿಗಳಾದ ಕಾಂತರಾಜು, ಮಾದೇಶ್, ರಂಗಸ್ವಾಮಿ, ಕಾರ್ತಿಕ್, ಕುಮಾರ್, ತೀರ್ಥಪ್ರಸಾದ್, ಮಂಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net