ಬಳಕೆಗೆ ಲಭ್ಯವಾಗದ ಶೌಚಗೃಹ

oppo_2
oppo_2
Published on

ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಗೆ ತೆರಳುವ ಪ್ರವೇಶ ದ್ವಾರದ ಬಳಿ ಪಟ್ಟಣ ಪಂಚಾಯಿತಿ ವತಿಯಿಂದ ಶೌಚಗೃಹ ನಿರ್ಮಿಸಿ ಒಂದೂವರೆ ವರ್ಷವೇ ಕಳೆದಿದೆ. ಆದರೆ ಬಳಕೆಗೆ ಲಭ್ಯವಾಗಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ತಾಲೂಕು ಕೇಂದ್ರವಾದ ಹನೂರು ತಹಸೀಲ್ದಾರ್ ಕಚೇರಿಗೆ ಕೆಲಸ, ಕಾರ್ಯಗಳ ನಿಮಿತ್ತ ನಿತ್ಯ ನೂರಾರು ಜನರು ಆಗಮಿಸುತ್ತಾರೆ. ಆದರೆ 5 ವರ್ಷದ ಹಿಂದೆ ಕಚೇರಿ ಹಿಂಭಾಗ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ನಿರ್ಮಿಸಿರುವ ಶೌಚಗೃಹಕ್ಕೆ ನೀರಿನ ಸೌಕರ್ಯ ಕಲ್ಪಿಸಿರಲಿಲ್ಲ. ಇದರಿಂದ ಶೌಚಗೃಹಕ್ಕೆ ಬೀಗ ಹಾಕಲಾಗಿದೆ. ನೀರಿನ ವ್ಯವಸ್ಥೆ ಕಲ್ಪಿಸಿ ಶೌಚಗೃಹವನ್ನು ಬಳಕೆಗೆ ನೀಡುವಂತೆ ಸಾರ್ವಜನಿಕರು ಹಲವು ಬಾರಿ ಒತ್ತಾಯಿಸಿದ್ದರು. ಆದರೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕಿಂಚಿತ್ತೂ ಗಮನಹರಿಸಲಿಲ್ಲ. ಪರಿಣಾಮ ಸಾರ್ವಜನಿಕರು ಶೌಚಕ್ಕಾಗಿ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದ ಶೌಚಗೃಹ ಹಾಗೂ ಬಯಲಿನ ಮೊರೆ ಹೋಗಬೇಕಿತ್ತು. ಇದರಿಂದ ಸಾರ್ವಜನಿಕರು ಅದರಲ್ಲೂ ಮಹಿಳೆಯರು ಹಾಗೂ ವೃದ್ಧರು ಹೆಚ್ಚಿನ ತೊಂದರೆ ಅನುಭವಿಸುವಂತಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net