

ಹನೂರು: ತಾಲೂಕಿನ ಕೆಂಚಯ್ಯನ ದೊಡ್ಡಿ ಸಮೀಪದಲ್ಲಿ ಬುಧವಾರ ಸಂಜೆ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ.
ಮೈಸೂರಿನ ಕ್ಯಾತನಹಳ್ಳಿಯ ಅಭಿ ಹಾಗೂ ವಿನಯ್ ಗಾಯಗೊಂಡವರು. ಇವರು ಬೆಳಗ್ಗೆ ಮ.ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಸಂಜೆ 4.30ರಲ್ಲಿ ಊರಿಗೆ ವಾಪಸ್ಸಾಗುತ್ತಿದ್ದ ವೇಳೆ ಕೆಂಚಯ್ಯನದೊಡ್ಡಿ ಬಳಿ ಎದುರಿಗೆ ಬಂದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಇಬ್ಬರು ಗಾಯಗೊಂಡಿದ್ದು, ಹಿಂಬದಿಯಲ್ಲಿ ಬರುತ್ತಿದ್ದ ಸ್ನೇಹಿತರೇ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ಕೆರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.