

ಹನೂರು: ತಾಲೂಕಿನ ಸಮನ್ವಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯೂನತೆಯುಳ್ಳ ವಿದ್ಯಾರ್ಥಿಗಳಿಗೆ ಭೌತಿಕ ಚಿಕಿತ್ಸಕರು (ಫಿಸಿಯೋಥೆರೆಪಿ) ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೇಂದ್ರಕ್ಕೆ ತಾತ್ಕಾಲಿಕ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ವಿದ್ಯಾರ್ಹತೆಯ ದಾಖಲೆಗಳೊಂದಿಗೆ ಜೂ.20 ರೊಳಗೆ ಕಚೇರಿಗೆ ಸಲ್ಲಿಸುವಂತೆ ಬಿಇಒ ಮಹೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.