

ಹನೂರು: ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಬುಧವಾರ ಮೋಟರ್‌ನಿಂದ ನೀರೆತ್ತುವ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಗ್ರಾಮದ ಸುರೇಶ್ (51) ಮೃತರು. ಸಂಜೆ 4 ಗಂಟೆಯಲ್ಲಿ ತೊಟ್ಟಿಗೆ ಅಳವಡಿಸಿದ್ದ ಮೋಟಾರ್‌ನಿಂದ ನೀರೆತ್ತುವ ಕಾರ್ಯದಲ್ಲಿ ಅವರು ತೊಡಗಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಅವರನ್ನು ಕುಟುಂಬಸ್ಥರು ಸಮೀಪದ ಕಾಮಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಹನೂರು ಪೊಲೀಸರು ಗುರುವಾರ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.