ಅನಂತರಾಮು, ಪ್ರಸಾದ್‌ಗೆ ಮುಖ್ಯಮಂತ್ರಿ ಪದಕ

ANANTHA RAMU
Published on

ಹನೂರು: ತಾಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಬಿ.ಅನಂತರಾಮು ಹಾಗೂ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಕೆ.ಪ್ರಸಾದ್ ಅವರು ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅರಣ್ಯ ಇಲಾಖೆಯಲ್ಲಿ ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವಿಕೆ ಹಾಗೂ ಇತರ ಕೆಲಸ ಕಾರ್ಯಗಳ ಮೂಲಕ ಗಣನೀಯ ಸೇವೆ ಸಲ್ಲಿಸಿದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ 2022 ಮತ್ತು 2023ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಶಸ್ತಿ ಪ್ರಕಟಿಸಿದ್ದು, ಇದರಲ್ಲಿ 2022ನೇ ಸಾಲಿನ ಪ್ರಶಸ್ತಿಗೆ ಕಾವೇರಿ ವನ್ಯಜೀವಿ ವಿಭಾಗದ ಕೌದಳ್ಳಿ ಅರಣ್ಯ ವಲಯದ ಡಿಆರ್‌ಎಫ್‌ಒ ಬಿ.ಅನಂತರಾಮು ಹಾಗೂ 2023ನೇ ಸಾಲಿನ ಪ್ರಶಸ್ತಿಗೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ಹನೂರು ಬಫರ್ ವಲಯದ ಕೆ. ಪ್ರಸಾದ್ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net