108 ಕೋಟಿ ರೂ ವೆಚ್ಚದ ಯೋಜನೆ

17 HANUR 2.
Published on

ಹನೂರು: ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಪ್ರಥಮ ಬಾರಿಗೆ ಹನೂರು ಪಟ್ಟಣಕ್ಕೆ ಆಗಮಿಸಿದ ಮಹೇಶ್ ಅವರು ಅಧಿಕಾರಿಗಳೊಂದಿಗೆ ಕೆ.ಶಿಪ್ ಯೋಜನೆಯ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.

ಕೊಳ್ಳೇಗಾಲ-ಹನೂರು ಮಾರ್ಗದಲ್ಲಿ 108 ಕೋಟಿ ರೂ., ವೆಚ್ಚದಲ್ಲಿ ಕೆ.ಶಿಪ್ ಯೋಜನೆಯಡಿ ಪ್ರಗತಿಯಲ್ಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಹನೂರಿಗೆ ಆಗಮಿಸಿದ ಅವರು ಪಟ್ಟಣದಲ್ಲಿ ಪ್ರಗತಿಯಲ್ಲಿರುವ ಸೇತುವೆ ಹಾಗೂ ವಿವಿಧೆಡೆ ಕೈಗೊಳ್ಳಬೇಕಾದ ರಸ್ತೆ ಕಾಮಗಾರಿ ಸಂಬಂಧ ಕ್ರಿಯಾಯೋಜನೆ ಸಮೇತ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜತೆಗೆ ರಸ್ತೆ ಬದಿಯಲ್ಲಿ ಸ್ವಾಧೀನ ಪಡೆಸಿಕೊಳ್ಳುವ ಕಟ್ಟಡಗಳ ಮಾಹಿತಿ ಪಡೆದ ಅವರು, ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಶೀಘ್ರ ಇ-ಸ್ವತ್ತು ನೀಡುವಂತೆ ಸೂಚಿಸಿದರು. ಅಲ್ಲದೆ ರಸ್ತೆ ಕಾಮಗಾರಿ ಪೂರ್ಣಗೊಳಿಸುವ ಸಂಬಂಧ ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.

ಇದೇ ವೇಳೆ ವಿಜಯವಾಣಿಯೊಂದಿಗೆ ಮಾತನಾಡಿದ ಅವರು, ಇದೀಗ ಕೆ.ಶಿಫ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸುತ್ತಿದ್ದು, ಈ ಬಗ್ಗೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಕೈಗೊಳ್ಳಬೇಕಾದ ಕಾರ್ಯದ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗುವುದು. ಬಳಿಕ ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದು ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸುವುದಾಗಿ ತಿಳಿಸಿದರು.
ಕೆ.ಶಿಪ್ ಎಇಇ ರಾಜೇಶ್ ಮುನ್ಸಿ, ಎಇ ಇಂದ್ರೇಶ್, ಪ.ಪಂ ಪ್ರಭಾರ ಕಂದಾಯ ನಿರೀಕ್ಷಕ ಮಂಜುನಾಥ್ ಇತರ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net