

ಹನೂರು: ತಾಲೂಕಿನ ಲೊಕ್ಕನಹಳ್ಳಿಯಲ್ಲಿ ಜು.5ರಂದು ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ನಗರಾಭಿವೃದ್ದಿ ಮತ್ತು ಪೌರಾಡಳಿತ ಸಚಿವ ಸುರೇಶ್, ಸಮ್ಮುಖದಲ್ಲಿ ಶುಕ್ರವಾರ ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿರುವ ಕಾರಣ ಹೋಬಳಿ ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಹನೂರು ತಾಲೂಕು ತಹಸೀಲ್ದಾರ್ ಗುರುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.