ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಪತ್ತೆ

Crime Logo
Published on

ಹನೂರು; ತಾಲೂಕಿನ ಕೌದಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬನ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಯ ವಯಸ್ಸು ಸುಮಾರು 55 ವರ್ಷ ಎಂದು ಅಂದಾಜಿಸಲಾಗಿದ್ದು, ಬಿಳಿ ಷರ್ಟ್, ನಿಕ್ಕರ್ ಧರಿಸಿದ ರೀತಿಯಲ್ಲಿ ಶವ ಪತ್ತೆಯಾಗಿದೆ. ಸುದ್ದಿ ತಿಳಿದ ಕೂಡಲೇ ರಾಮಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಫಾರೆಸ್ಟ್ ಗಾರ್ಡ್ ರಕ್ಷಿತ್ ಅವರು ನೀಡಿದ ದೂರಿನ ಮೇರೆಗೆ ಮೃತದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net