ಬಿರುಗಾಳಿಗೆ ಮರಬಿದ್ದು ಸಂಚಾರಕ್ಕೆ ತೊಡಕು

22 HANUR 7
Published on

ಹನೂರು: ತಾಲೂಕಿನ ಕೂಡಲೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಸೋಮವಾರ ಜೋರು ಗಾಳಿಗೆ ಮರದ ಬೃಹತ್ ಕೊಂಬೆ ಹಾಗೂ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕೆಲಕಾಲ ಸಂಚಾರಕ್ಕೆ ತೊಡಕಾಗಿತ್ತು.

ಮಧ್ಯಾಹ್ನ 3ರ ವೇಳೆಯಲ್ಲಿ ವಿಪರೀತ ಗಾಳಿಯಿಂದಾಗಿ ಮರದ ಕೊಂಬೆ ರಸ್ತೆ ಅಡ್ಡಲಾಗಿ ಬಿದ್ದಿತು. ಇದರ ಜತೆಗೆ ಟ್ರಾನ್ಸ್‌ಫಾರ್ಮರ್ ಅಳವಡಿಸಿದ್ದ ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಆದರೆ ಈ ವೇಳೆ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಮರವನ್ನು ತೆರೆವುಗೊಳಿಸಿದರೆ, ಸೆಸ್ಕ್ ಸಿಬ್ಬಂದಿ ವಿದ್ಯುತ್ ಕಂಬವನ್ನು ತೆರವುಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net