ರಸ್ತೆ ಅಪಘಾತದಲ್ಲಿ ಯುವಕ ಸಾವು

Bike Accident_2
Published on

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕನೊಬ್ಬ ಮೃತಪಟ್ಟಿದ್ದಾನೆ.

ಮ.ಬೆಟ್ಟ ಸಮೀಪದ ಪುದೂರು ಗ್ರಾಮದ ಕರುಣಾಕರ (26) ಮೃತ. ತೆಂಗಿನ ಕಾಯಿ ವ್ಯಾಪಾರ ಮಾಡುತ್ತಿದ್ದ ಈತ ಬೆಳಗ್ಗೆ ಮ.ಬೆಟ್ಟದ ಶಿವದರ್ಶಿನಿ ವಸತಿ ಗೃಹಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ. ಈ ವೇಳೆ ಕೊಳ್ಳೇಗಾಲದ ಕಡೆಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಈತ ಸ್ಥಳದಲ್ಲಿಯೇ ಕೊನೆಯುಸಿರೆಳೆದ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ಮಾಡಿಸಿ ವಾರಸುದಾರಿಗೆ ನೀಡಿದರು. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net