ಕಿರಣ್ ಕುಮಾರ್‌ಗೆ ಬೀಳ್ಕೊಡುಗೆ

01 HANUR 4
Published on

ಹನೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪ್ರೌಢಶಾಲಾ ವಿಭಾಗದಲ್ಲಿ ಶಿಕ್ಷಣ ಸಂಯೋಜಕರಾಗಿ 5 ವರ್ಷ ಕರ್ತವ್ಯ ನಿರ್ವಹಿಸಿ ಬೈಲೂರು ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡ ಕಿರಣ್‌ಕುಮಾರ್ ಅವರನ್ನು ಗುರುವಾರ ಕಚೇರಿಯಲ್ಲಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಬಿಇಒ ಗುರುಲಿಂಗಯ್ಯ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಮಹದೇವ, ಶಿಕ್ಷಣ ಸಂಯೋಜಕ ಕಂದವೇಲು, ಚಿನ್ನಪ್ಪಯ್ಯ, ಅಶೋಕ್, ಮಹೇಶ್, ಬಿಆರ್‌ಪಿ ದಿನೇಶ್, ಕಚೇರಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net